ಪ್ರಯಾಣಿಕರಿಗೆ ಬಿಗ್ ಶಾಕ್: ದಸರಾಗೆ ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು, ಪ್ರಯಾಣಿಕರು ಕಂಗಾಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದಸರಾ ಹಬ್ಬದ ಪ್ರಯುಕ್ತ ಊರಿಗೆ ಪ್ರಯಾಣಿಸುವವರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ಖಾಸಗಿ ಬಸ್‌ಗಳ ಟಿಕೆಟ್‌ ದರ ದುಪ್ಪಟ್ಟಾಗಿದೆ. ಇದರಿಂದಾಗಿ ಪ್ರಯಾಣಿಕರು ಕಂಗಾಲಾಗಿದ್ದಾರೆ.

ಹೌದು, ದಸರಾ ರಜೆಗೆ ಊರಿಗೆ ತೆರಳುವವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದು, ಬೆಂಗಳೂರಿನಿಂದ ಹೊರಡುವ ಬಸ್​ಗಳ ದರ ದುಪ್ಪಟ್ಟಾಗಿದೆ.

ಅ.21ರಿಂದ ರಜೆಗಳು ಆರಂಭವಾಗುವ ಹಿನ್ನೆಲೆ ಜನರು ಅ. 20ರಂದು ಊರಿಗೆ ತೆರಳಲು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಅ.20ಕ್ಕೆ ಬುಕ್ಕಿಂಗ್ ಮಾಡಲು ಮುಂದಾದ ಜನರಿಗೆ ಖಾಸಗಿ ಬಸ್ ಮಾಲೀಕರು ಶಾಕ್ ನೀಡಿದ್ದಾರೆ. ಬುಕ್ಕಿಂಗ್ ವೆಬ್ ಸೈಟ್​ನಲ್ಲಿ ಟಿಕೆಟ್ ದರ ದುಪ್ಪಟ್ಟಾಗಿದೆ. ಅಲ್ಲದೇ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಟಿಕೆಟ್ ದರ ಸಾಮಾನ್ಯ ದರಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!