ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ: 7 ಪ್ರಯಾಣಿಕರಿಗೆ ಗಾಯ

ಹೊಸದಿಗಂತ ವರದಿ ಹಾವೇರಿ: ಮುಂಜಾನೆಯ ಪ್ರಯಾಣದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಲಕ್ಸುರಿ ಬಸ್ ರಸ್ತೆಯಲ್ಲೇ ಉರುಳಿಬಿದ್ದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾಷ್ಟ್ರೀಯ ಹೆದ್ದಾರಿ 68ರಲ್ಲಿ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಇಂಟರ್‌ಸಿಟಿ ಖಾಸಗಿ ಲಕ್ಸುರಿ ಬಸ್ ಮೊಟೆಬೆನ್ನೂರು ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. … Continue reading ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ: 7 ಪ್ರಯಾಣಿಕರಿಗೆ ಗಾಯ