ಹೊಸದಿಗಂತ ವರದಿ,ಮಂಡ್ಯ :
ರಸ್ತೆ ದಾಟುತ್ತಿದ್ದ ಜಿಂಕೆಗೆ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಅದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕು ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ವನ್ಯಜೀವಿ ವಲಯದಲ್ಲಿ ನಡೆದಿದೆ.
ಪ್ರವಾಸದ ನಂತರ ಬೆಂಗಳೂರಿನಿಂದ ಬಂದಿದ್ದ ಖಾಸಗಿ ಬಸ್ ಹಲಗೂರಿನತ್ತ ತೆರಳುತ್ತಿತ್ತು. ಈ ವೇಳೆ ಕಾವೇರಿ ಜಂಗಲ್ ಲ್ಜ್ಾ ಅಂಡ್ ರೆಸಾರ್ಟ್ ಬಳಿ ಜಿಂಕೆ ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಜಿಂಕೆ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದೆ.
ಘಟನೆ ನಂತರ ಚಾಲಕ ಬಸ್ಸಿನೊಂದಿಗೆ ಪರಾರಿಯಾಗುತ್ತಿದ್ದ. ಸುದ್ಧಿ ತಿಳಿದ ನಂತರ ತಾಳವಾಡಿ ಬಳಿಯ ಚೆಕ್ಪೋಸ್ಟ್ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಸ್ಸನ್ನು ತಡೆದು ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಖಾಸಗಿ ಬಸ್ ಚಾಲಕ ಗಾಲೀಬ ಎಂದು ಗುರುತಿಸಲಾಗಿದೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.