ಗೋವಾಗೆ ತೆರಳುತ್ತಿದ್ದ ಬಸ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ ಯಲ್ಲಾಪುರ:

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಬಸ್‌ ಚಾಲಕ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆ ಕೇ ಮಿಲನ್ ಹೋಟೆಲ್ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.

ಖಾಸಗಿ ಬಸ್ಸು ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25 ಜನ ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆಯಲ್ಲಿ ಚಿಕ್ಕ ಪುಟ್ಟದಾಗಿ ಗಾಯಗೊಂಡವರನ್ನು ಯಲ್ಲಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಪೊಲೀಸ್ ನಿರೀಕ್ಷಕರಾದ ರಂಗನಾಥ್, ನೀಲಮ್ಮನವರ್ ಹಾಗೂ ಪಿಎಸ್‌ಐ ರವಿ ಗುಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!