ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೇರೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಡೆದಿದೆ.
ಬಸ್ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಬಸ್‌ನಲ್ಲಿ ಒಟ್ಟು 24 ಜನ ಪ್ರಯಾಣಿಕರು ಇದ್ದರು. ಬಸ್ ಪಲ್ಟಿಯಿಂದಾಗಿ 5 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.