October 11, 2026
Sunday, October 11, 2026
spot_img

ಬಾಗಲಕೋಟೆ ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಗಲಕೋಟೆಯ ಬೀಳಗಿ ಕ್ರಾಸ್‌ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರ ಮೂಲದ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ನೋಂದಣಿ ಹೊಂದಿರುವ ಖಾಸಗಿ ಸ್ಲೀಪರ್‌ ಬಸ್‌ವೊಂದು ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪ್ರಯಾಣಿಕನೋರ್ವನ ಜೀವ ಹೋಗಿದೆ. ಎದುರಿಗೆ ಬಂದಿದ್ದ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 15ರಿಂದ 20 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೀಳಗಿ ಪೊಲೋಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Must Read