ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೋಲಾರದಲ್ಲಿ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ ನಸುಕಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಹರಿತ ಟ್ರಾವೆಲ್ಸ್‌ನ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ರಭಸಕ್ಕೆ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಪೊದುಟೂರು ಮೂಲದ ಅನಿತಾ (58) ಮೃತ ಮಹಿಳೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಖಾಸಗಿ ಬಸ್ ಆಂದ್ರಪ್ರದೇಶದ ಬದ್ವೆಲ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಶ್ರೀನಿವಾಸಪುರ, ಕೋಲಾರ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

