ಹೊಸದಿಗಂತ ವರದಿ ಹಾವೇರಿ:
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 15 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ, ಹಾವೇರಿ ತಾಲ್ಲೂಕಿನ ವರದಾಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಬುಧವಾರ ಬೆಳಗ್ಗೆ ನಡೆದಿದೆ.
ಚಾಲಕನು ನಸುಕಿನ ಜಾವದ ನಿದ್ರೆಯ ಮಂಪರಿನಲ್ಲಿ ಬಸ್ ನ ನಿಯಂತ್ರಣ ತಪ್ಪಿದ್ದು ಈ ಘಟನೆಗೆ ಕಾರಣ ಎನ್ನಲಾಗಿದೆ. ಬಸ್ ಮುಖ್ಯರಸ್ತೆಯಿಂದ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ಖಾಸಗಿ ಬಸ್ ಹೊರಟಿತ್ತು ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎರಡು ಅಂಬ್ಯಲೆನ್ಸ್ ಮೂಲಕ ಗಾಯಾಳುಗಳನ್ನ ಜಿಲ್ಲಾಸ್ಪತ್ರೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.