ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬರ್ಗಾ ತಾಲೂಕಿನ ಸಮೀಪ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಘಟನೆಯಲ್ಲಿ ಬಾಲಕ ವೈಭವ್ (9) ಮೃತಪಟ್ಟಿದ್ದಾನೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.