ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಕುದುರೆಮುಖಕ್ಕೆ ವೀಕೆಂಡ್ ಟ್ರಿಪ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಎಂ.ಎನ್.ಸಿ ಕಂಪನಿಗಳಲ್ಲಿ ಕೆಲಸಮಾಡುವ ಯುವಕ ಯುವತಿಯರ 40ಕ್ಕೂ ಹೆಚ್ಚು ಮಂದಿಯ ಗುಂಪು ನೇತ್ರಾವತಿ ಪೀಕ್ ಟ್ರೆಕ್ಕಿಂಗ್‌ಗಾಗಿ ಭೇಟಿ ನೀಡುತ್ತಿದ್ದ ವೇಳೆ, ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣವೇ ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಬಂದು ತನಿಖೆ ನಡೆಸುತ್ತಿದ್ದಾರೆ.