September 13, 2026
Sunday, September 13, 2026
spot_img

ಹಾವೇರಿ ಬಳಿ ಖಾಸಗಿ ಬಸ್ ಪಲ್ಟಿ; ಓರ್ವ ಯುವಕ ಸಾವು, 20ಕ್ಕೂ ಅಧಿಕ ಜನರಿಗೆ ಗಾಯ

ಹೊಸದಿಗಂತ ವರದಿ ಹಾವೇರಿ:

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 18 ವರ್ಷದ ಯುವಕನೊಬ್ಬ ಮೃತಪಟ್ಟು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ.

ಮೃತ ಯುವಕನನ್ನು ಬಾವರಸಿಂಗ್ ರಜಪೂತ್ (18) ಎಂದು ಗುರುತಿಸಲಾಗಿದೆ. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬಸ್ ಹಾವೇರಿ ಹೊರವಲಯದ ಹೆದ್ದಾರಿ ಮೇಲೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡ 20ಕ್ಕೂ ಅಧಿಕ ಜನರನ್ನು ಸ್ಥಳೀಯರ ನೆರವಿನಿಂದ ಹಾಗೂ ತುರ್ತು ಸೇವೆಗಳ ಮೂಲಕ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹಾವೇರಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪಲ್ಟಿಯಾದ ಬಸ್‌ನ್ನು ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದರು.

ಈ ಕುರಿತು ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !