BIG NEWS | ನೆಲ್ಯಾಡಿ ಬಳಿ ಪಲ್ಟಿಯಾದ ಖಾಸಗಿ ಬಸ್: 15 ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ ಈ ಘಟನೆಯಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಆಂಬುಲೆನ್ಸ್ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ನೆರವಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!