ಖಾಸಗಿ ಬಸ್ ಪಲ್ಟಿ: ಮಹಿಳೆ ಸಾವು, ಹಲವರಿಗೆ ಗಾಯ

ಹೊಸದಿಗಂತ ವರದಿ ನಾಪೋಕ್ಲು:

ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿರುವ ಹಾಗೂ ಹಲವು ಮಂದಿ ಗಾಯಗೊಂಡ ಘಟನೆ ನಾಪೋಕ್ಲು- ಕೊಳಕೇರಿ ಮುಖ್ಯ ರಸ್ತೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಕಕ್ಕಬ್ಬೆ ನಿವಾಸಿ ಸರಸ್ವತಿ (65) ಎಂಬವರು ಮೃತ ದುರ್ದೈವಿ.

ಕೊಳಕೇರಿ- ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯ ಕೋಟೇರಿ ಎಂಬಲ್ಲಿ ಪಲ್ಟಿಯಾಗಿದೆ.
ಬಸ್’ನಲ್ಲಿದ್ದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಪೋಕ್ಲು ಮತ್ತು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಪೈಕಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾದ ಸರಸ್ವತಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!