ಖಾಸಗಿ ಬಸ್-ಟ್ರಕ್ ನಡುವೆ ಡಿಕ್ಕಿ: 6ಮಂದಿ ಸಾವು, 21 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಖಾಸಗಿ ಬಸ್-ಟ್ರಕ್ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. 50 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ ಲುಧಿಯಾನದಿಂದ ರಾಯ್ ಬರೇಲಿಗೆ ಹೋಗುತ್ತಿತ್ತು.

ಬುಧವಾರ ಬೆಳಗಿನ ಜಾವ ನಾಲ್ಕೂವರೆ ಗಂಟೆಗೆ ಆಗ್ರಾ-ಲಖನೌ ರಸ್ತೆಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಅಪಘಾತ ನಡೆದ ತಕ್ಷಣ ಮಾಹಿತಿ ಪಡೆದ ಪೊಲೀಸರು ಹಾಗೂ ಅಧಿಕಾರಿಗಳು ಸ್ಪಂದಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗಾಯಾಳುಗಳನ್ನು ಸಮೀಪದ ಸೈಫಾಯಿ ವೈದ್ಯಕೀಯ ಕಾಲೇಜಿಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕ ನಿದ್ರೆಯ ಅಮಲಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ತೋರುತ್ತದೆ.

ನಿದ್ರೆಯ ಮಂಪರಿನಲ್ಲಿದ್ದ ಕಾರಣ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಧಿಕಾರಿಗಳು ಬಸ್ ಅನ್ನು ಅಪಘಾತ ಸ್ಥಳದಿಂದ ತೆರವುಗೊಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!