ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಕಂಪನಿಯ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಅದೇ ಕಂಪನಿಯ ಉದ್ಯೋಗಿ, ಆಂಧ್ರಪ್ರದೇಶದ ಮೂಲದ ಸ್ಮಷ್ಟಿಲ್ ನಾಗೇಶ್ ಎಂದು ಗುರುತಿಸಲಾಗಿದೆ.
ಶೌಚಾಲಯಕ್ಕೆ ಹೋಗುವ ಮಹಿಳೆಯರ ವಿಡಿಯೋವನ್ನು ಈತ ರಹಸ್ಯವಾಗಿ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿದ್ದ ಎನ್ನಲಾಗಿದೆ. ಇತ್ತೀಚೆಗೆ ಈ ಘಟನೆ ನಡೆದಿದ್ದು, ಅರೋಪಿಯಿಂದ ಕ್ಷಮೆ ಕೇಳಿಸಿ ಆಡಳಿತ ಮಂಡಳಿ ಸುಮ್ಮನಾಗಿತ್ತು ಎನ್ನಲಾಗಿದೆ. ಆದರೆ ಮಹಿಳಾ ಉದ್ಯೋಗಿಯೊಬ್ಬರ ಪತಿಗೆ ಈ ವಿಚಾರ ತಿಳಿದು ಘಟನೆ ಬೆಳಕಿಗೆ ಬಂದಿದೆ. ಈತನ ಮೊಬೈಲ್‌ನಲ್ಲಿ ಹಲವು ಮಹಿಳೆಯರ ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.