25 ಸಾವಿರಕ್ಕೆ ಮತದಾರರ ವೈಯಕ್ತಿಕ ಮಾಹಿತಿ ಮಾರಾಟ: ಖಾಸಗಿ ಸಂಸ್ಥೆಯ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಆರೂವರೆ ಲಕ್ಷಕ್ಕೂ ಹೆಚ್ಚು ಮತದಾರರ ವೈಯಕ್ತಿಕ ಮಾಹಿತಿ ಮಾರಾಟ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ತನಿಖೆ ಆರಂಭವಾಗಿದೆ.

ಆಗ್ನೇಯ ವಿಭಾಗದ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಸ್ಥೆಯ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹಣ ಪಡೆದು ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದಾರೆಂದು ಚುನಾವಣೆ ಅಧಿಕಾರಿಗಳು ದೂರು ನೀಡಿದ್ದು, ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ. ತನಿಖಾ ಹಂತದಲ್ಲಿರುವ ಕಾರಣ ಸಂಸ್ಥೆಯ ಹೆಸರು ಬಹಿರಂಗ ಮಾಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 6 ಲಕ್ಷದಷ್ಟು ಮತದಾರರ ಮಾಹಿತಿ ಈ ಸಂಸ್ಥೆಯ ಬಳಿ ಇತ್ತು ಎನ್ನಲಾಗಿದೆ. ಇದು ನಿರ್ಧಿಷ್ಟ ಕ್ಷೇತ್ರದ ಮತದಾರರ ಪಟ್ಟಿಯೇ ಅಥವಾ ಅಲ್ಲವೇ ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!