ಹೊಸ ದಿಗಂತ್ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿತ್ತು , ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ʼಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ, ಆದರೆ ಖಾಸಗಿ ಆಸ್ಪತ್ರೆಗಳು ಮಾತ್ರ 15 ದಿನಗಳಿಂದ ಕೇವಲ 15 ರಿಂದ 20ರಷ್ಟು ಬೆಡ್ʼಗಳನ್ನು ಮಾತ್ರ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳು ತಕ್ಷಣ ಎಚ್ಛೆತ್ತುಕೊಂಡು ಕೋವಿಡ್ ಬೆಡ್ ಗಳ ಸಂಖ್ಯೆ ಹೆಚ್ಚಿಸಬೇಕು , ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಖಡಕ್ ಎಚ್ಚರಿಕೆ ನೀಡಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ , ಈ ಬಗ್ಗೆ ಮಾಹಿತಿ ನೀಡಿದರು.