ದಿಗಂತ ವರದಿ ಬೀದರ್:
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾಡಳಿತವು ವಿಶೇಷವಾಗಿ ಸೆ.17ರಂದು ಹಮ್ಮಿಕೊಂಡ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಬೀದರ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು ಸಾಥ್ ನೀಡಲಿವೆ.
ಬೃಹತ್ ಲಸಿಕಾ ಮೇಳದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಹೇಗೆ ಸಹಕಾರ ನೀಡಬೇಕು ಎಂಬುದರ ಬಗ್ಗೆ ಸೆಪ್ಟೆಂಬರ್ 16ರಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಬೀದರ ಸೇರಿದಂತೆ ಔರಾದ್, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್ ತಾಲೂಕುಗಳಲ್ಲಿನ ವಿವಿಧ ನರ್ಸಿಂಗ್ ಹೋಮ್ಸ್, ಮೆಡಿಕಲ್ ಮತ್ತು ಡೆಂಟಲ್ ಸೇರಿದಂತೆ ಎಲ್ಲ ಬಗೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯರು ಸಭೆಯಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಸೆ.17ರಂದು ನಡೆಯುವ ಲಸೀಕಾರಣ ಸಂದರ್ಭದಲ್ಲಿ ತಾವುಗಳು ತಮ್ಮ ಆಸ್ಪತ್ರೆಯ ವೈದ್ಯರು ಹಾಗೂ ನರ್ಸಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಯೊAದಿಗೆ ಲಸೀಕಾ ಕೇಂದ್ರಗಳಿಗೆ ಬಂದು ಲಸೀಕಾರಣಕ್ಕೆ ಸಹಕಾರ ನೀಡಬೇಕು ಎಂದು ಎಲ್ಲ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ವೈದ್ಯರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಡಿಎಚ್ಓ ಡಾ.ವಿ.ಜಿ.ರೆಡ್ಡಿ ಹಾಗೂ ಇತರರು ಇದ್ದರು.