ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಮತ್ತು ಮಾಹಿತಿ ಮರೆಮಾಚಿದರೆ ದೂರು ದಾಖಲಿಸುವ ಹಕ್ಕು ಚುನಾವಣಾ ಆಯೋಗಕ್ಕೆ ಮಾತ್ರ ಇದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 125ಎ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಇದ್ದರೆ ಅಥವಾ ಮಾಹಿತಿ ಮರೆಮಾಚಿದ್ದರೆ, ಚುನಾವಣಾ ಆಯೋಗ ಮಾತ್ರ ದೂರು ದಾಖಲಿಸಬೇಕಾಗುತ್ತದೆ. ಅದು ಬಿಟ್ಟು ಖಾಸಗಿ ವ್ಯಕ್ತಿಗಳು ಕ್ರಿಮಿನಲ್ ಪ್ರಕರಣ ದಾಖಲಿಸಲು ಅವಕಾಶವಿಲ್ಲ.
ಖಾಸಗಿ ವ್ಯಕ್ತಿಗಳು ಚುನಾವಣಾ ಅರ್ಜಿ ದಾಖಲಿಸಬಹುದು. ಹಾಗೂ ದೂರುದಾರರು ಕಾನೂನಿನಲ್ಲಿ ಲಭ್ಯವಿರುವ ಪರಿಹಾರ ಪಡೆಯಲು ಮುಕ್ತರಾಗಿದ್ದಾರೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.