ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳ ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢ ಜಶ್‌ಪುರ-ನಾರಾಯಣಪುರದಲ್ಲಿನ ರತನ್‌ಪಹ್ಲಿ ಅರಣ್ಯದಲ್ಲಿ ಖಾಸಗಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ವಿಮಾನವು ಪತನಗೊಂಡಿದ್ದು, ಕೂಡಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಅರಣ್ಯ ಸುತ್ತ ಆವರಿಸಿದೆ. ಈ ವೇಳೆ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ. ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ತೊಡಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Copy and paste this URL into your WordPress site to embed
Copy and paste this code into your site to embed