ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಬಳಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಭದ್ರಾವತಿಯ ಸ್ಫೂರ್ತಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿದ ಶಾಲಾ ಬಸ್ ಆಗಿದ್ದು. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ಮಾಡಿಕೊಟ್ಟಿದೆ, ಇದೆ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಇನ್ನು ಅಪಘಾತದಲ್ಲಿ ಗಾಯಗೊಂಡ ಮಕ್ಕಳನ್ನು ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭದ್ರಾವತಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.