ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನ ಅಪಘಾತಕ್ಕೀಡಾಗಿ ಮಹಿಳಾ ತರಬೇತಿ ಪೈಲಟ್ ಗಾಯಗೊಂಡಿರುವ ಘಟನೆ ನಡೆದಿದೆ.
ತಾಂತ್ರಿಕ ಕಾರಣಗಳಿಂದಾಗಿ ಸಿಂಗಲ್ ಎಂಜಿನ್ ವಿಮಾನವು ಉಚಾರ್ಪಿ ಗ್ರಾಮದ ಮೈದಾನದಲ್ಲಿ ಈ ಘಟನೆ ಸಂಭವಿಸಿದೆ ಎಂದು ಮೆಹ್ಸಾನಾ ತಾಲೂಕು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಿಜಿ ತಿಳಿಸಿದ್ದಾರೆ.
ಅಪಘಾತದಲ್ಲಿ ಪೈಲಟ್‌ಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎನ್ನಲಾಗಿದೆ.