ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಪ್ರತಿಷ್ಠಾಪನೆಗಾಗಿ ದೇಶಕ್ಕೆ ದೇಶವೇ ಕಾತರದಿಂದ ಕಾಯುತ್ತಿದ್ದರೆ, ಪ್ರಾಣ ಪ್ರತಿಷ್ಠಾಪನಾ ಪುಣ್ಯ ಕ್ಷಣಗಳ ನೇರ ಪ್ರಸಾರ ವೀಕ್ಷಿಸಲು ಉತ್ತರ ಪ್ರದೇಶದ ಜೈಲುಗಳಲ್ಲಿ ಕೂಡಾ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಉತ್ತರ ಪ್ರದೇಶದ ಸಚಿವ ಧರ್ಮವೀರ್ ಪ್ರಜಾಪತಿ, ಉತ್ತರ ಪ್ರದೇಶದ ಜೈಲುಗಳಲ್ಲಿ ಕೈದಿಗಳಿಗೆ ಭಜನೆ, ಕೀರ್ತನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಅಯೋಧ್ಯೆಯಿಂದ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ಕೂಡಾ ಜೈಲುಗಳಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.