ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಹಂಗೇರಿಯ ಬುಡಾಪೆಸ್ಟ್ನಲ್ಲಿ ಭಾನುವಾರ ನಡೆದ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.
ಮಹಿಳೆಯರ 73 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ ಪ್ರಿಯಾ ಮಲಿಕ್, ಬೆಲರೂಸ್ನ ಸೆನಿಯಾ ಪಟಾಪೊವಿಚ್ ಅವರನ್ನು 5-0 ಅಂತರದಲ್ಲಿ ಮಣಿಸಿ ಪದಕ ಮುಡಿಗೇರಿಸಿಕೊಂಡರು.
ಇತ್ತ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೀರಾ ಬಾಯ್ ಚಾನು ಶನಿವಾರ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದರು. ಇದಾದ ಮರುದಿನವೇ ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದುಕೊಂಡಿದ್ದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಪ್ರಿಯಾ ಮಲಿಕ್ ಅವರು 2019 ರಲ್ಲಿ ಪುಣೆಯಲ್ಲಿ ನಡೆದ ಖೇಲೋ ಇಂಡಿಯಾ ಯುವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದರು. ಶುಕ್ರವಾರ ಜಸ್ಕರನ್ ಸಿಂಗ್ ಅವರು 60 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದರು. ಅವರು ಉಜ್ಬೇಕಿಸ್ತಾನ್ನ ಕಮ್ರಾನ್ಬೆಕ್ ಕಡಮೊವ್ ವಿರುದ್ಧ ಸೋತಿದ್ದಾರೆ.