Tuesday, October 3, 2023

Latest Posts

ಉಸ್ತುವಾರಿ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಯೋಗ್ಯರಲ್ಲ: ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್

ಹೊಸ ದಿಗಂತ ವರದಿ, ಕಲಬುರಗಿ:

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಲು ಯೋಗ್ಯರಲ್ಲ ಎಂದು ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಹೇಳಿದರು.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಅನುಭವದ ಕೊರತೆ ಕಾಡುತ್ತಿದೆ. ಅವರು ಸಚಿವರಾದ ಬಳಿಕ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.ಹೀಗಾಗಿ, ಅವರನ್ನು ಕೂಡಲೆ ಉಸ್ತುವಾರಿ ಸ್ಥಾನದಿಂದ ಕೆಳಗಿಳಿಸಿ ಬೇರೆಯವರಿಗೆ ಜಿಲ್ಲಾ ಉಸ್ತುವಾರಿ ನೀಡಬೇಕೆಂದು ಒತ್ತಾಯಿಸಿದರು.

ಇದರ ಜೊತೆ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಪರಮೇಶ್ವರ ಅವರು ಕಲಬುರಗಿ ಜಿಲ್ಲೆಯಲ್ಲಿ ಕಾನೂನು- ಸುವ್ಯವಸ್ಥೆ ಸುಧಾರಿಸಬೇಕು ಎಂದು ರಾಠೋಡ್ ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!