July 11, 2026
Saturday, July 11, 2026
spot_img

ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದಲ್ಲೇ ವಿದ್ಯಾರ್ಥಿಗಳಿಗೆ ಕಲುಷಿತ ಊಟ: 30ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು, ಕ್ರಮಕ್ಕೆ ಆಗ್ರಹ!

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರ ತಾಲೂಕಿನ ದಂಡೋತಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆಯೂ ಅತ್ಯಂತ ದುರದೃಷ್ಟಕರ.ಕೂಡಲೇ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಆಗ್ರಹಿಸಿದ್ದಾರೆ.

ಕಲಬುರಗಿಯ ಜಿಲ್ಲೆಯಲ್ಲಿ ವಸತಿ ನಿಲಯಗಳ ದುಸ್ತಿತಿ, ಕಳಪೆ ಗುಣಮಟ್ಟಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಆದರೆ ಈ ಬಗ್ಗೆ ಗಮನ ಹರಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸುತ್ತಿರುವ ಪರಿಣಾಮ ಮಕ್ಕಳು ಸಂಕಷ್ಟಕ್ಕೆ ಸಿಲುಕುವಂತಾಗಿರುವುದು ದುರಂತ.ಸ್ವತಃ ಸಚಿವರದೇ ಆದ ಚಿತ್ತಾಪುರ ಕ್ಷೇತ್ರದಲ್ಲೇ ಇಷ್ಟೊಂದು ದೊಡ್ಡ ದುರಂತ ಸಂಭವಿಸಿದ್ದರೂ, ತುರ್ತು ಚಿಕಿತ್ಸೆಗೆ ಸೂಕ್ತ ಆಂಬ್ಯುಲೆನ್ಸ್ ವ್ಯವಸ್ಥೆ ಇಲ್ಲದೆ ಅಸ್ವಸ್ಥ ಮಕ್ಕಳನ್ನು ಟಂಟಂ ವಾಹನಗಳಲ್ಲಿ ಆಸ್ಪತ್ರೆಗೆ ಸಾಗಿಸಿರುವುದು ಇಡೀ ಆಡಳಿತದ ದುರ್ವವ್ಯವಸ್ಥೆಗೆ ಸಾಕ್ಷಿಯಾಗಿದೆ ಎಂದರು.

ಇದನ್ನೂ ಓದಿ:

ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಕನಿಷ್ಠ ಶುದ್ಧ ಕುಡಿಯುವ ನೀರು ಒದಗಿಸಲಾಗದ ಸ್ಥಿತಿಗೆ ಇಲಾಖೆಗಳು ತಲುಪಿದ್ದು, ಕಳಪೆ ಆಹಾರ, ಅಸ್ವಚ್ಚತೆ, ಬೆಡ್ ಗಳ ಅವ್ಯವಸ್ಥೆ ಸೇರಿ ಹಲವು ಸಮಸ್ಯೆಗಳಿದ್ದರೂ ಸ್ಪಂದನೇ ಕ್ಷೀಣವಾಗಿದೆ. ಉಸ್ತುವಾರಿ ಸಚಿವರು ದೇಶ, ವಿದೇಶದ ಚಿಂತೆ ಬಿಟ್ಟು ತಮ್ಮ ಕ್ಷೇತ್ರ, ಜಿಲ್ಲೆಯ ಮೂಲ ಸೌಕರ್ಯ ನೀಡುವತ್ತ ಗಮನ ಹರಿಸಬೇಕು. ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು, ಗುಣಮಟ್ಟದ ಸೌಲಭ್ಯಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !