Monday, November 10, 2025

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಪ್ರಕರಣ: ಲಾತೂರ್‌ನಲ್ಲಿ ಖಾಕಿ ಬಲೆಗೆ ಬಿದ್ದ ಆರೋಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಈ ಬಂಧನವಾಗಿದೆ.

ಬಂಧಿತ ಆರೋಪಿಯನ್ನು ಸೋಲಾಪುರ ಮೂಲದ ದಾನೇಶ್ ನರೋಣಿ ಎಂದು ಗುರುತಿಸಲಾಗಿದೆ. ಬೆದರಿಕೆ ಕರೆ ಮಾಡಿದ ನಂತರ ದಾನೇಶ್ ಸೋಲಾಪುರದಿಂದ ಲಾತೂರ್‌ಗೆ ಪರಾರಿಯಾಗಿದ್ದನು. ಈ ಹಿನ್ನೆಲೆಯಲ್ಲಿ, ಬೆಂಗಳೂರು ಮತ್ತು ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ಗೂಗಲ್‌ನಲ್ಲಿ ಸಚಿವರ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡಿದ್ದ ದಾನೇಶ್, ಕರೆ ಮಾಡಿ ನಿಂದಿಸಿದ್ದ. ಈ ಕುರಿತು ಸಚಿವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸದ್ಯ ಆರೋಪಿಯನ್ನು ಕಲಬುರಗಿ ಪೊಲೀಸರು ವಶಕ್ಕೆ ಪಡೆದಿದ್ದು, ಇಂದು ರಾತ್ರಿಯ ವೇಳೆಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ಕರೆತರುವ ಸಾಧ್ಯತೆ ಇದೆ. ಅಲ್ಲಿ ಕಲಬುರಗಿ ಪೊಲೀಸರು ಆರೋಪಿಯನ್ನು ಸದಾಶಿವನಗರ ಠಾಣೆಯ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ.

error: Content is protected !!