ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಪತ್ರದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಬಹಿರಂಗವಾಗಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.