Sunday, August 14, 2022

Latest Posts

ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಖಂಡಿಸಿದ ಪ್ರಿಯಾಂಕ್ ಖರ್ಗೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಯಾದಗಿರಿ: 

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಕಟುಪದಗಳಿಂದ ಖಂಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು ಯಾದಗಿರಿಯ ಘಟನೆ ನಾಚಿಕೆಗೇಡಿನಿಂದ ಕೂಡಿದೆ. ಈ ಘಟನೆ ಇಂದಿನ ಯುವಕರ ಕುಸಿಯುತ್ತಿರುವ ನೈತಿಕತೆ ಹಾಗೂ ಕಠೋರತೆಯ ಸಂದೇಶವಾಗಿರುವುದಲ್ಲದೇ, ತಾವು ಏನು ಬೇಕಾದರೂ ಮಾಡಬಹುದು ಎನ್ನುವ ಅವರ ಧೋರಣೆಯನ್ನು ತೋರಿಸುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಇದೇ ಸಂದರ್ಭದಲ್ಲಿ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss