ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಸಂಸತ್ತಿಗೆ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್‌ನ್ನು ತೆಗೆದುಕೊಂಡು ಹೋಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರಕ್ಕೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.
ಪ್ಯಾಲೇಸ್ತೀನಿನ ಜನ ಒಗ್ಗಟ್ಟಿನ ಸಂಕೇತವಾಗಿ ಕಾಣುವ ಕಲ್ಲಂಗಡಿ ಹಣ್ಣಿನ ಚಿತ್ರ ಅವರ ಚೀಲದಲ್ಲಿ ಕಾಣಿಸಿಕೊಂಡಿದೆ. ಇನ್ನೂ ಕಳೆದ ವಾರ ದೆಹಲಿಯಲ್ಲಿರುವ ಪ್ಯಾಲೆಸ್ತೀನ್ ರಾಯಭಾರ ಕಚೇರಿಯ ಚಾರ್ಜ್ ಡಿ ಅಫೇರ್ಸ್ ಅಬೇದ್ ಎಲ್ರಾಜೆಗ್ ಅಬು ಜಾಜರ್ ಅವರನ್ನು ಭೇಟಿಯಾಗಿದ್ದರು.
ಪ್ರಿಯಾಂಕ ಗಾಂಧಿ ನಡೆಗೆ ಬಿಜೆಪಿ ಸಂಸದ ಗುಲಾಂ ಅಲಿ ಖತಾನಾ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಜನರು ಸುದ್ದಿಗಾಗಿ ಇಂತಹ ಕೆಲಸಗಳನ್ನು ಮಾಡುತ್ತಾರೆ. ಜನರಿಂದ ತಿರಸ್ಕರಿಸಲ್ಪಟ್ಟಾಗ, ಅವರು ಅಂತಹ ಕ್ರಮಗಳನ್ನು ಆಶ್ರಯಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.