ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಲಿವುಡ್ ಸಿನಿಮಾಗಳಲ್ಲಿ ಆ್ಯಕ್ಟೀವ್ ಆಗಿರುವ ಪ್ರಿಯಾಂಕಾ ಚೋಪ್ರಾ ಈಗ ಮತ್ತೆ ಸೌತ್ ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ರಾಜಮೌಳಿ jನಿರ್ದೇಶನದಲ್ಲಿ ಮಹೇಶ್ ಬಾಬು ಜೊತೆ ನಟಿಸಲು 30 ಕೋಟಿ ರೂ. ಸಂಭಾವನೆಯನ್ನು ನಟಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಪ್ರಿಯಾಂಕಾಗೆ 42 ವರ್ಷವಾದ್ರೂ ನಟಿಯ ಚಾರ್ಮ್ ಇನ್ನೂ ಕಮ್ಮಿಯಾಗಿಲ್ಲ. ಅ ಹಾಲಿವುಡ್‌ನಲ್ಲಿ ಆ್ಯಕ್ಷನ್ ಕ್ವೀನ್ ಆಗಿ ಮಿಂಚುತ್ತಿದ್ದಾರೆ. ಹೀಗಿರುವಾಗ ಬಹುನಿರೀಕ್ಷಿತ ಸಿನಿಮಾ ರಾಜಮೌಳಿ ಮತ್ತು ಮಹೇಶ್ ಬಾಬು ಸಿನಿಮಾದಲ್ಲಿ ನಟಿಸಲು ಪ್ರಿಯಾಂಕಾ 30 ಕೋಟಿ ರೂ. ಕೇಳಿದ್ದಾರೆ. ಅದಕ್ಕೆ ಚಿತ್ರತಂಡ ಕೂಡ ಸಮ್ಮತಿ ಸೂಚಿಸಿದೆ ಎನ್ನಲಾದ ವಿಚಾರವೊಂದು ಚರ್ಚೆಗೆ ಗ್ರಾಸವಾಗಿದೆ.
ಇನ್ನೂ ಭಾರತದ ಯಾವುದೇ ನಟಿ ಇಷ್ಟು ಸಂಭಾವನೆ ಪಡೆದಿಲ್ಲ. ಹಾಗಾಗಿ ಪ್ರಿಯಾಂಕಾ ಭಾರತದ ಅತ್ಯಂತ ದುಬಾರಿ ನಟಿ ಎನಿಸಿಕೊಂಡಿದ್ದಾರೆ.
ಮಹೇಶ್ ಬಾಬು ಈ ಸಿನಿಮಾಗೆ ಕಳೆದ 2 ವರ್ಷಗಳಿಂದ ತಯಾರಿ ನಡೆಯುತ್ತಿದೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನೆರವೇರಿದೆ. ಸಿನಿಮಾದ ಶೂಟಿಂಗ್ ಕೂಡ ಶುರುವಾಗಿದೆ.