ರಾಜ್ಯ ಚುನಾವಣಾ ಕಣಕ್ಕೆ ‘ಪ್ರಿಯಾಂಕಾ’ ಎಂಟ್ರಿ: ‘ಕೈ’ ಕಲಿಗಳ ಪರ ಭರ್ಜರಿ ಕ್ಯಾಂಪೇನ್‍

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಿಯಾಂಕಾ ಗಾಂಧಿ ಇಂದು ರಾಜ್ಯ ಚುನಾವಣಾ ಪ್ರಚಾರ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರ ಹಾಗೂ ಸಂಜೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಪ್ರಚಾರ ನಡೆಸಲಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕಾ ಮಹಿಳಾ ಮತದಾರರನ್ನು ಗಮನದಲ್ಲಿಟ್ಟುಕೊಂಡು ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ಈ ಬಾರಿ ಮಹಿಳಾ ಮತದಾರರ ಮನ ಗೆಲ್ಲಲು ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.

ಪ್ರಿಯಾಂಕಾ ಮೂಲಕ ಮಹಿಳೆಯರ ಮತಗಳನ್ನು ಭದ್ರಪಡಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಒಟ್ಟಿನಲ್ಲಿ ಈ ಬಾರಿಯೂ ಮಹಿಳೆಯರ ಮತದಾನದ ಹಕ್ಕನ್ನು ಖಾತ್ರಿ ಪಡಿಸಲು ಪ್ರಿಯಾಂಕಾ ಗಾಂಧಿ ಮೂಲಕ ಕಾಂಗ್ರೆಸ್ ಮಹಿಳಾ ಮತದಾರರ ಬೇಟೆ ನಡೆಸಲಿದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!