ಚುನಾವಣಾ ಪ್ರಚಾರಕ್ಕಿಂದು ಪ್ರಿಯಾಂಕಾ ಗಾಂಧಿ ಎಂಟ್ರಿ, ಎಲ್ಲೆಲ್ಲಿ ಪ್ರಚಾರ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡಕ್ಕೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಎಂಟ್ರಿ ನೀಡಲಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಈಗಾಗಲೇ ರಾಹುಲ್ ಗಾಂಧಿ ಅಬ್ಬರದ ಪ್ರಚಾರ ಮಾಡಿ ಹೋಗಿದ್ದಾರೆ. ರಾಹುಲ್ ಗಾಂಧಿ ದೆಹಲಿಗೆ ವಾಪಾಸಾದ ಬೆನ್ನಲ್ಲೇ ಇದೀಗ ಪ್ರಿಯಾಂಕಾ ಗಾಂಧಿ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ.

ಮೈಸೂರು, ಚಾಮರಾಜನಗರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಟಿ. ನರಸೀಪುರ ಕ್ಷೇತ್ರದ ಯಳವರ ಹುಂಡಿಯಲ್ಲಿ ನಡೆಯುವ ಸಾರ್ವಜನಿಕ ಸಮಾವೇಶ, ಚಾಮರಾಜನಗರದ ಹನೂರು ಪಟ್ಟಣದ ಗೌರಿಶಂಕರ ಹಾಲ್‌ನಲ್ಲಿ ಮಹಿಳೆಯರೊಡನೆ ಸಂವಾದ, ಕೃಷ್ಣಾಜನಗರದಲ್ಲಿ ಬೃಹತ್ ರ‍್ಯಾಲಿ ನಡೆಸಲಿದ್ದಾರೆ.

ಇನ್ನೇನು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯಾದ್ಯಂತ ಎಲ್ಲ ಪಕ್ಷಗಳು ಅಬ್ಬರದ ಪ್ರಚಾರ ಆರಂಭಿಸಿವೆ. ಕಾಂಗ್ರೆಸ್‌ನ ಹಿರಿಯ ನಾಯಕರಾದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ರಾಜ್ಯದಲ್ಲಿ ತಲಾ 10 ದಿನ ಪ್ರಚಾರ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!