ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ ಗಾಂಧಿ: ಖರ್ಗೆ ಗುಣಗಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ ಗಾಂಧಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಣಗಾನ ಮಾಡಿದರು.

1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದ್ದು, ಇದರ ವೇದಿಕೆ ಕಾರ್ಯಕ್ರಮದಲ್ಲಿ ಖರ್ಗೆ ಅವರು ಮಾತನಾಡಿದರು.

ಬಿಜೆಪಿ, ಆರ್‌ಎಸ್ಎಸ್ ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ ಗಾಂಧಿ. ಅವರು ನೋಡಲು ಮೆತ್ತಗೆ ಕಾಣಬಹುದು, ಸ್ವಲ್ಪ ಮುಟ್ಟಿನೋಡಿದ್ರೆ ಗೊತ್ತಾಗುತ್ತೆ. ತಂದೆ ಕಳೆದುಕೊಂಡು ಬೆಳೆದು ಬಂದವರು ಪ್ರಿಯಾಂಕಾ, ಎಂದಿಗೂ ತಮ್ಮ ಕೊರತೆ ತೋರಿಸಲಿಲ್ಲ ಎಂದು ಹೇಳಿದರು.

. ವಿರೋಧಿ ಬಣದವರು ಕಾಂಗ್ರೆಸ್ ವಿರುದ್ಧ ಟೀಕೆ ಮಾಡ್ತಿದ್ದಾರೆ. 2004 ರಲ್ಲಿ ಸೋನಿಯಾ ಗಾಂಧಿ ದೇಶದ ಪ್ರಧಾನಿಯಾಗಬೇಕಿತ್ತು. ಆದರೆ ಅವರು ಅಧಿಕಾರ ಸ್ವೀಕರಿಸಿದೇ ಮನಮೋಹನ್ ಸಿಂಗ್‌ಗೆ ತ್ಯಾಗ ಮಾಡಿದರು. ಸೋನಿಯಾ ಗಾಂಧಿ ಅವರ ಕೃಪೆಯಿಂದ ನಾನು ಎಐಸಿಸಿ ಅಧ್ಯಕ್ಷನಾಗಿದ್ದೇನೆ. ಈಗ ನಾವು ಅಂತಹ ತ್ಯಾಗ ಮಾಡಲು ಸಿದ್ಧರಿದ್ದೀವಾ? ಅಂತ ಪ್ರಶ್ನೆ ಮಾಡಿದರು.

ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ದೇಶಕ್ಕಾಗಿ ಬಹಳಷ್ಟು ತ್ಯಾಗ ಮಾಡಿದ್ದಾರೆ. ಆದ್ರೂ ಬಿಜೆಪಿ ನಾವು ಕೊಟ್ಟ ಕಾರ್ಯಕ್ರಮಗಳನ್ನ ಟೀಕೆ ಮಾಡಿ, ನಮನ್ನ ಹೀಯಾಳಿಸಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಅಧಿಕಾರದಲ್ಲೇ ಇದ್ದರೂ ಸುಮ್ಮನೆ ಮಾತನಾಡುತ್ತಾರೆ ಹೊರತು ಯಾರಿಗೆ ಏನೂ ಮಾಡಿಲ್ಲ. ಏಕೆಂದರೆ ಈ ದೇಶದ ಬಡವರ ಬಗ್ಗೆ ಬಿಜೆಪಿ ಅವರಿಗೆ ಚಿಂತೆ ಇಲ್ಲ, ರೈತರ ಬಗ್ಗೆ ಚಿಂತೆ ಇಲ್ಲ. ಮೋದಿ ಈ ಬಗ್ಗೆ ಎಂದಿಗೂ ಗಮನ ಕೊಟ್ಟಿಲ್ಲ, ಕೋಡೋದೂ ಇಲ್ಲ. ಬಿಜೆಪಿ, ಆರ್‌ಎಸ್‌ಎಸ್‌, ಹಿಂದೂಮಹಾಸಭಾ ಯಾವಾಗಲೂ ದಲಿತ ವಿರೋಧಿಗಳು. ಆದ್ರೆ ಕಾಂಗ್ರೆಸ್‌ ಯಾವತ್ತಿಗೂ ಬಡವರ ಪರ ಇರುತ್ತದೆ ಎಂದು ನುಡಿದರು.

ಮಹಾತ್ಮ ಗಾಂಧೀಜಿಗೆ ಗುಂಡು ಹಾರಿಸಿ ಕೊಂದದ್ದು ಯಾರು? ಆ ಗೋಡ್ಸೆ ಸಾರ್ವಕರ್‌ ಶಿಷ್ಯ. ಗಾಂಧಿ ಗುಜರಾತ್‌ನವರೇ ಆದರೂ ಮೋದಿಗೆ ಗೌರವ ಇಲ್ಲ. ಏಕೆಂದರೆ ಮೋದಿ ಪೂಜೆ ಮಾಡೋದು ಗಾಂಧಿಗೆ ಗುಂಡು ಹಾರಿಸಿದ ಗೋಡ್ಸೆಯನ್ನೇ ಎಂದು ಕುಟುಕಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!