ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿರೋ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಗೆಲುವು ಸಾಧಿಸಿದ್ದಾರೆ. ಬರೋಬ್ಬರಿ 4 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದು ಬೀಗಿದ್ದಾರೆ.
ಯಾಂಕ ಗಾಂಧಿಯವರು ವಯನಾಡು ಕ್ಷೇತ್ರದಲ್ಲಿ ಬರೋಬ್ಬರಿ 6,22,338 ಮತಗಳು ಪಡೆದುಕೊಂಡಿದ್ದಾರೆ. ಇವರ ವಿರುದ್ಧ ಕಣದಲ್ಲಿದ್ದ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿ ಸತ್ಯನ್ ಮೊಕೇರಿ 2,11,407 ಮತ ಪಡೆದಿದ್ದಾರೆ. ಸತ್ಯನ್ ಮೊಕೇರಿ ವಿರುದ್ಧ ಪ್ರಿಯಾಂಕ ಗಾಂಧಿ ಅವರು 4,10,931 ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಕಳೆದ ಬಾರಿ 3 ಲಕ್ಷದ ಅಂತರದಿಂದ ಗೆದ್ದಿದ್ದ ದಾಖಲೆಯನ್ನು ಮುರಿದಿದ್ದಾರೆ.