ಚುನಾವಣಾ ಪ್ರಚಾರಕ್ಕೂ ಮುನ್ನ ಶೃಂಗೇರಿ ಶಾರದಾಂಬೆಯ ದರುಶನ ಪಡೆದ ಪ್ರಿಯಾಂಕಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಪ್ರಿಯಾಂಕಾ ಗಾಂಧಿ ಇಂದು ಕಾಫಿನಾಡು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸುವ ಮುನ್ನ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶಕ್ತಿ ಪೀಠಗಳಲ್ಲಿ ಒಂದಾದ ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ದೇವಸ್ಥಾನ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದಾರೆ.

ಶಾರದಾಂಬೆಯ ದರ್ಶನ ಪಡೆದ ಪ್ರಿಯಾಂಕಾ ಗಾಂಧಿ ದೇವಿಗೆ ನಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದೇವಸ್ಥಾನ ಭೇಟಿ ಬಳಿಕ ಪ್ರಿಯಾಂಕಾ ಗಾಂಧಿ ನರಸಿಂಹ ವನದಲ್ಲಿರುವ ಗುರುಗಳ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಶೃಂಗೇರಿ ಬಳಿಕ ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೆ ಭೇಟಿ ನೀಡಲಿರುವ ಪ್ರಿಯಾಂಕ ಗಾಂಧಿ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡರ ಪರ ಮತಯಾಚಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!