ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ಪುತ್ರ ರೈಹಾನ್ ವಾದ್ರಾ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಕುಟುಂಬದ ಆಪ್ತ ವಲಯಗಳನ್ನು ಉಲ್ಲೇಖಿಸಿ ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ.
25 ವರ್ಷದ ರೈಹಾನ್ ವಾದ್ರಾ ಮತ್ತು ಅವಿವಾ ಬೇಗ್ ಹಲವು ವರ್ಷಗಳಿಂದ ಪರಿಚಯ ಹೊಂದಿದ್ದು, ಇದೀಗ ಮದುವೆ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. ಅವಿವಾ ಬೇಗ್ ಮತ್ತು ಅವರ ಕುಟುಂಬ ದೆಹಲಿಯಲ್ಲಿ ನೆಲೆಸಿದ್ದು, ಗಾಂಧಿ ಕುಟುಂಬದೊಂದಿಗೆ ಆತ್ಮೀಯ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.
ರೈಹಾನ್ ವಾದ್ರಾ ವೃತ್ತಿಪರ ದೃಶ್ಯ ಕಲಾವಿದರಾಗಿದ್ದು, ಕಳೆದ 10 ವರ್ಷಗಳಿಂದ ಛಾಯಾಗ್ರಹಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ವನ್ಯಜೀವಿ ಸೇರಿದಂತೆ ವಿವಿಧ ವಿಷಯಗಳ ಛಾಯಾಚಿತ್ರಗಳು ಅವರ ಪೋರ್ಟ್‌ಫೋಲಿಯೊದಲ್ಲಿವೆ. ನಿಶ್ಚಿತಾರ್ಥದ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಬಾಕಿಯಿದೆ.

