Saturday, December 9, 2023

Latest Posts

ನಾಳೆಯಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ವಾದ್ರಾ ಭಾಗಿ:4 ದಿನಗಳ ಕಾಲ ʻರಾಗಾʼಗೆ ಸಾಥ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ಎರಡು ದಿನಗಳ ವಿರಾಮದ ಬಳಿಕ ನಾಳೆಯಿಂದ ಮತ್ತೆ ಪುನರಾರಂಭಗೊಳ್ಳಲಿದೆ. ಬುಧವಾರ ಬುರ್ಹಾನ್‌ಪುರ ಬಳಿ ಯಾತ್ರೆ ಮಧ್ಯಪ್ರದೇಶ ರಾಜ್ಯವನ್ನು ಪ್ರವೇಶಿಸಲಿದೆ. ಈ ಪ್ರವಾಸದಲ್ಲಿ ರಾಹುಲ್ ಗಾಂಧಿ ಜೊತೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಭಾಗವಹಿಸಲಿದ್ದಾರೆ. ಈ ವಿಷಯವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಂಗಳವಾರ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ಸೋಮವಾರ ಮತ್ತು ಮಂಗಳವಾರ ಗುಜರಾತ್ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಭಾಗವಹಿಸುವ ಕಾರಣ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ನಾಳೆಯಿಂದ (ಬುಧವಾರ) ಭಾರತ್ ಜೋಡೋ ಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದರು. ಬುರ್ಹಾನ್‌ಪುರ ಬಳಿ ಯಾತ್ರೆ ಮಧ್ಯಪ್ರದೇಶವನ್ನು ಪ್ರವೇಶಿಸಲಿದೆ ಇ ವೇಳೆ ನಾಲ್ಕು ದಿನಗಳ ಕಾಲ ರಾಹುಲ್ ಗಾಂಧಿ ಜೊತೆಗೆ ಪ್ರಿಯಾಂಕಾ ಗಾಂಧಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಸೋನಿಯಾ ಗಾಂಧಿ ಈಗಾಗಲೇ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕರ್ನಾಟಕದ ಮಂಡ್ಯದಲ್ಲಿ ರಾಹುಲ್ ಗಾಂಧಿ ಜೊತೆ ಸೋನಿಯಾ ಪಾದಯಾತ್ರೆ ನಡೆಸಿದರು. ಪ್ರಿಯಾಂಕಾ ವಾದ್ರಾ ನಾಳೆ ಮಧ್ಯಪ್ರದೇಶ ತಲುಪಲಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಲ್ಕು ದಿನಗಳ ಕಾಲ ಪ್ರಿಯಾಂಕಾ ವಾದ್ರಾ ತನ್ನ ಸಹೋದರನೊಂದಿಗೆ ಹೆಜ್ಜೆ ಹಾಕಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!