ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ವರ್ಷದ ಆರಂಭದಲ್ಲಿ ನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿದೆ ಮತ್ತು ಚುನಾವಣೆಗೆ ಪ್ರಿಯವ್ರತ್ ಸಿಂಗ್ ಅವರನ್ನು “ವಾರ್ ರೂಮ್” ಅಧ್ಯಕ್ಷರನ್ನಾಗಿ ನೇಮಿಸಿದೆ.
ನೇಮಕವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ. ಸತತ 15 ವರ್ಷಗಳ ಕಾಲ ದೆಹಲಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಕಳೆದ ಎರಡು ಚುನಾವಣೆಗಳಲ್ಲಿ ಕಳಪೆ ಪ್ರದರ್ಶನ ನೀಡಿದೆ. ಸದ್ಯ ವಿಧಾನಸಭೆಯಲ್ಲಿ ಪಕ್ಷಕ್ಕೆ ಶಾಸಕರೇ ಇಲ್ಲ. ಬಿಜೆಪಿ ಮತ್ತು ಎಎಪಿ ಕೂಡ ದೆಹಲಿ ವಿಧಾನಸಭಾ ಚುನಾವಣೆಗೆ ತಯಾರಿ ಆರಂಭಿಸಿವೆ.
ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ನವೆಂಬರ್ 29 ರಂದು ತನ್ನ ಕಾರ್ಯಕಾರಿ ಸಮಿತಿ ಸಭೆ ನಡೆಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.