ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣೆಯಲ್ಲಿ ಸಿನಿ ತಾರೆಯರು ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಳಿದಿದ್ದು, ಈಗಾಗಲೇ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವ ನಟ ಕಿಚ್ಚ ಸುದೀಪ್ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯ್ಷಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್ ಬಿಜೆಪಿ ಪರ ಸುದೀಪ್ ಪ್ರಚಾರ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.
ನಟ ಕಿಚ್ಚ ಸುದೀಪ್ ಕೂಡ ನಮ್ಮ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ, ಸುದೀಪ್ ಅವರು ಬಿಜೆಪಿ ಪಕ್ಷಕ್ಕೆ ಸೇರಿಲ್ಲ, ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದಾರೆ ಅಷ್ಟೇ, ನಮ್ಮ ಪಕ್ಷದ ಪರ ಕೂಡ ಪ್ರಚಾರ ನಡೆಸುತ್ತಾರೆ ಎಂದರು. ಗೀತಾ ಶಿವರಾಜ್ ಕುಮಾರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರ ಜೊತೆ ಶಿವರಾಜ್ ಕುಮಾರ್ ಕೂಡ ಇರಲಿದ್ದಾರೆ ಎಂದರು.