ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷ ವಿರೋಧಿಸಿ ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದ ವೇಳೆ ಪ್ಯಾಲೆಸ್ತೀನ್ ಮತ್ತು ಇಸ್ರೇಲಿ ಪರ ಪ್ರತಿಭಟನಾಕಾರರ ನಡುವೆ ಘರ್ಷಣೆಯಾಗಿರುವ ಘಟನೆ ಲಂಡನ್‌ನಲ್ಲಿ ಸೋಮವಾರ ಸಂಜೆ ನಡೆದಿದೆ.
ಲಂಡನ್‌ನ ಹೈ ಸ್ಟ್ರೀಟ್ ಕೆನ್ಸಿಂಗ್ಟನ್ ಟ್ಯೂಬ್ ಸ್ಟೇಷನ್‌ನಲ್ಲಿ ಸಂಜೆ 6 ಗಂಟೆ ಸುಮಾರಿಗೆ ಇಸ್ರೇಲಿ ರಾಯಭಾರ ಕಚೇರಿಯ ಮುಂದೆ ಈ ಘಟನೆ ನಡೆದಿದೆ. ಇಸ್ರೇಲಿ-ಪ್ಯಾಲೆಸ್ತೀನಿಯರ ನಡುವಿನ ಉದ್ವಿಗ್ನತೆಯನ್ನು ತಡೆಯಲು ಪೊಲೀಸ್ ಅಧಿಕಾರಿಗಳು ಹರಸಾಹಸಪಟ್ಟರು. ಈ ದೃಶ್ಯಗಳ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಅಕ್ಟೋಬರ್ 7 ರಂದು ಹಮಾಸ್ ಉಗ್ರು ಇಸ್ರೇಲ್ ಮೇಲೆ ದಾಳಿ ನಡೆಸಿದರು. ದೇಶದ ದಕ್ಷಿಣ ಮತ್ತು ಮಧ್ಯ ಭಾಗಗಳಿಗೆ ರಾಕೆಟ್‌ಗಳ ಸುರಿಮಳೆ ಸುರಿಸಿದ್ದು, 700 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಗಿದೆ.