ಪ್ರೊ ಕಬಡ್ಡಿ ಸೆಮಿಫೈನಲ್: ಜೈಪುರ ವಿರುದ್ಧ ಸೋತು ಟೂರ್ನಿಗೆ ವಿದಾಯ ಹೇಳಿದ ಬೆಂಗಳೂರು ಬುಲ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪ್ರೊ ಕಬಡ್ಡಿ ಲೀಗ್ ಟೂರ್ನಿಯ 9ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಸೆಮಿಫೈನಲ್ ನಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧದ ರೋಚಕ ಹೋರಾಟದಲ್ಲಿ 29-49 ಅಂಕಗಳ ಅಂತರದಲ್ಲಿ ಸೋಲು ಅನುಭವಿಸಿತು. ಈ ಮೂಲಕ ಟೂರ್ನಿಗೆ ವಿದಾಯ ಹೇಳಿದೆ.

ಇತ್ತ 20 ಅಂಕಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ ಜೈಪುರ ಪಿಂಕ್ ಪ್ಯಾಂಥರ್ಸ್ ಫೈನಲ್ ಪ್ರವೇಶಿಸಿದೆ.

ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ಜೈಪುರ ಸಂಪೂರ್ಣ ಹಿಡಿತ ಸಾಧಿಸಿತು. ರೈಡ್ ಹಾಗೂ ಟ್ಯಾಕಲ್ ಅಂಕಗಳ ಮೂಲಕ ಬೆಂಗಳೂರು ಬುಲ್ಸ್ ತಂಡಕ್ಕೆ ತೀವ್ರ ಆಘಾತ ನೀಡಿತು.

ದ್ವಿತಿಯಾರ್ಧದಲ್ಲಿ ಬೆಂಗಳೂರು ಬುಲ್ಸ್ ತಂಡದ ಮೇಲಿನ ಒತ್ತಡ ಹೆಚ್ಚಾಯಿತು. ರೈಡಿಂಗ್‌ನಲ್ಲಿ ಬೆಂಗಳೂರು ಬುಲ್ಸ್ ಸಮಬಲದ ಹೋರಾಟ ನೀಡಿತು. ಆದರೆ ಟ್ಯಾಕಲ್ ವಿಚಾರದಲ್ಲಿ ತೀವ್ರ ಹಿನ್ನಡೆ ಅನುಭವಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!