ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ಕನ್ನಡಪರ ಹೋರಾಟಗಾರ, ಕಸಾಪ ನಿಕಟಪೂರ್ವ ಅಧ್ಯಕ್ಷ, ಜೆಡಿಎಸ್ ಮುಖಂಡ ಸಿಂ.ಲಿಂ. ನಾಗರಾಜ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಿಂಗರಾಜಿಪುರದ ಸ್ವಗೃಹದಲ್ಲಿಯೇ ಹೃದಯಾಘಾತ ಸಂಭವಿಸಿದ್ದು, ಜೆಡಿಎಸ್ ಕಾರ್ಯಕರ್ತರು, ಸ್ಥಳೀಯ ಮುಖಂಡರು ನಿವಾಸದತ್ತ ಆಗಮಿಸಿದ್ದಾರೆ.
ಜೆಡಿಎಸ್‌ನ ನಿಷ್ಠಾವಂತ ನಾಯಕರಾಗಿದ್ದ ನಾಗರಾಜ್ ಅವರ ಮೃತದೇಹವನ್ನು ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಗೆ ಹಸ್ತಾಂತರಿಸುವ ಸಾಧ್ಯತೆ ಇದೆ.