ಪಾಕ್ ಪರ ಘೋಷಣೆ: ಬಾಗಲಕೋಟೆಯಲ್ಲಿ ಬಿಜೆಪಿ ಪ್ರೊಟೆಸ್ಟ್

ಹೊಸದಿಗಂತ ವರದಿ ಬಾಗಲಕೋಟೆ :

ರಾಜ್ಯ ಸಭೆ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನಂತರ ಜಿಲ್ಲಾಡಳಿತ ಭವನದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿಯ ಕಾರ್ಯಕರ್ತರನ್ನು ಡಿಸಿ ಆಡಳಿತ ಭವನದ ಗೇಟ್ ಮುಂದೆ ತಡೆದು ಪೊಲೀಸರು ವಶಕ್ಕೆ ಪಡೆದುಕೊಂಡರು.
ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಅಶೋಕ ಲಿಂಬಾವಳಿ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಕೂಡಲೇ ಸರ್ಕಾರ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಪಾಧ್ಯಕ್ಷ ರಾಜು ರೇವಣಕರ,ಸತ್ಯನಾರಾಯಣ ಹೇಮಾದ್ರಿ, ಉಮೇಶ ಹಂಚಿನಾಳ, ಬಸವರಾಜ ಹುನಗುಂದ, ಸಂಗಪ್ಪ ಗಾಣಿಗೇರ, ಶ್ರೀನಾಥ ಸಜ್ಜನ್,ರಾಜಶೇಖರ ಮುದೇನೂರ, ಪ್ರಭು ಹಡಗಲಿ, ವಿಜಯಲಕ್ಷ್ಮೀ ಇನ್ನಿತರರು ಇದ್ದರು‌.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!