ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ವಿಚಾರವಾಗಿ ಆರೋಪ ಸಾಬೀತಾದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದ್ರೋಹಿಗಳನ್ನು ಮಟ್ಟಹಾಕುವ ಸಮಯ ಬಂದಾಗಿದೆ. ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ್ದು ಯಾರು ಎಂದು ಸ್ಪಷ್ಟನೆ ಸಿಕ್ಕ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ.
ಪಾಕಿಸ್ತಾನ್ ಝಿಂದಾಬಾದ್ ಎಂದು ಕೂಗಿದ್ದು ನಿಜವೇ ಎನ್ನುವ ಸ್ಪಷ್ಟನೆ ಸಿಗಬೇಕು, ವಿಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.