ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಕ್ ಪರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಳಗಾವಿಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ಅಣ್ಣಸಾಹೇಬ್ ಜೊಲ್ಲೆ ವಿರುದ್ಧ ಪುತ್ರಿಯನ್ನು ಗೆಲ್ಲಿಸುವಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸಕ್ಸಸ್ ಆಗಿದ್ದಾರೆ .

ಇತ್ತಚಿಕ್ಕೋಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಈ ಸಂಭ್ರಮಾಚರಣೆಯಲ್ಲಿ ಕಿಡಿಗೇಡಿಯೊಬ್ಬ ಪಾಕ್ ಪರ ಘೋಷಣೆ ಕೂಗಿದ್ದಾನೆ. ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ ಜಮೀರ್ ನಾಯಿಕವಾಡಿ ಎನ್ನುವಾತ ಪಾಕಿಸ್ತಾನ್‌ಕ್ಕೆ, ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್‌ ಎಂದು ಕೂಗಿದ್ದಾನೆ.

ಕೂಡಲೇ ಅಲರ್ಟ್​ ಆದ ಚಿಕ್ಕೋಡಿ ಪೊಲೀಸರು, ಬೆಳಗಾವಿ ಬಸ್ ನಿಲ್ದಾಣದಲ್ಲಿ ಜಮೀರ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ರಾಜ್ಯಸಭಾ ಚುನಾವಣೆಯಫಲಿತಾಂಶ ಹೊರಬಿದ್ದಾಗ ವಿಧಾನಸೌಧದಲ್ಲೇ ಕಾಂಗ್ರೆಸ್‌ ನೂತನ ಸದಸ್ಯ ನಾಸಿರ್ ಹುಸೇನ್ (Nasir Hussain) ಬೆಂಬಲಿಗರು ಪಾಕಿಸ್ತಾನದ ಪರ ಜೈಕಾರ ಕೂಗಿದ್ದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದವು. ಇದರ ಬೆನ್ನಲ್ಲೇ ಇದೀಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಕ್​ ಪರ ಘೋಷಣೆ ಮೊಳಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!