ಪಾಕ್ ಪರ ಘೋಷಣೆ: ಸದನದಲ್ಲಿ ಕೈ, ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಅವಾಚ್ಯ ಶಬ್ದಗಳಿಂದ ನಿಂದಿಸಿ ಸದನದಲ್ಲಿ ಕೋಲಾಹಲ ಸೃಷ್ಟಿಸಿದ್ದಾರೆ. ಕಲಾಪವನ್ನು ಮುಂದೂಡಿದರೂ ಸದನದ ಬಾವಿಗಿಳಿದ ನಾಯಕರು ಕೈ, ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ನಾಯಕ ಕೋಟಾ ಶ್ರೀನಿವಾಸ ಪೂಜಾರ ಅವರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತು ವಿಚಾರವನ್ನು ಪ್ರಸ್ತಾಪಿಸಿದರು. ಇದೆ ವೇಳೆ ಸಲೀಂ ಅಹ್ಮದ್ ಅವರು ಮಧ್ಯ ಪ್ರವೇಶಿಸಿ ಯಾರೂ ಘೋಷಣೆ ಕೂಗಿಲ್ಲ ಎಂದು ಉತ್ತರಿಸಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯ ರವಿಕುಮಾರ್, ಈ ಸರ್ಕಾರ ನಿರುಪಯುಕ್ತ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!