ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ ಹಿನ್ನೆಲೆಯಲ್ಲಿ ವಿಧಾನಸಭೆ ಬಿಜೆಪಿ ಪ್ರತಿಭಟನೆ ನಡೆಸಿತು.
ಸದನದ ಬಾವಿಗಳಿಗೆ ವಿಪಕ್ಷ ಬಿಜೆಪಿ ಸದಸ್ಯರಿಂದ ಪ್ರತಿಭಟನೆ ನಡೆಸಲಾಯಿತು.ಸ್ಪೀಕರ್ ಪೀಠದ ಎದುರು ಬಿಜೆಪಿ ಸದಸ್ಯರು ಕಾಗದ ಹರಿದು ಎಸೆದಿರುವ ಘಟನೆ ನಡೆಯಿತು. ಹೀಗಾಗಿ ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 9 ಗಂಟೆಗೆ ಸ್ಪೀಕರ್ ಯುಟಿ ಖಾದರ್ ಮುಂದುಡಿದರು.
ನಿಗದಿಯಂತೆ ಇಂದು ಕಲಾಪ ಮುಕ್ತಾಯವಾಗಬೇಕಿತ್ತು ಆದರೆ ಇದೆ ವೇಳೆ ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದು ಹಸಿದಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ನಾಳೆ ಬೆಳಗ್ಗೆ 9 ಗಂಟೆಗೆ ವಿಧಾನಸಭಾ ಕಲಾಪವನ್ನು ಮುಂದುಡಿದರು.