ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಮೂವರನ್ನು ಬಂಧಿಸಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧದಲ್ಲಿ (Vidhana Soudha) ಪಾಕ್ ಪರ ಘೋಷಣೆ ಕೇಸ್​ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ ಮಾಡಲಾಗಿದೆ.

ರಾಜ್ಯಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಗಲಿಗರು ವಿಜಯೋತ್ಸವದ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಕುರಿತ ವಿಡಿಯೋವನ್ನು ಎಪ್‌ಎಸ್‌ಎಲ್ ವರದಿಗೆ ಕಳುಹಿಸಲಾಗಿತ್ತು. ಆದರೆ, ಈಗ ಎಪ್‌ಎಸ್ಎಲ್ ವರದಿಯನ್ನು ಆಧರಿಸಿ ವಿಧಾನಸೌಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ ಪ್ರೇರಿತವಾಗಿ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು ಈಗ ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಈ ಮೂವರು ಆರೋಪಿಗಳನ್ನು ಅಶೋಕ್ ಪುರಂ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ಇನ್ನು ಪಾಕ್‌ಪರ ಘೋಷಣೆ ಕೂಗಿದ್ದಾರೆಂಬ ಆರೋಪದಡಿ ಬಂಧಿಸಲಾದ ಎಲ್ಲ ಆರೋಪಿಗಳನ್ನು ಕೂಡ ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ, ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಬೇಕು. ಆದರೆ, ನ್ಯಾಯಾಲಯದ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮನೆಗೆ ತೆರಳಿ ಆರೋಪಿಗಳನ್ನು ಹಾಜರುಪಡಿಸುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!