ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಆವರಣದಲ್ಲಿ ಡಾ. ನಾಸಿರ್ ಹುಸೇನ್ ಪರ ಬೆಂಬಲಿಗರು ಪಾಕಿಸ್ತಾನ್ ಝಿಂದಾಬಾದ್ ಎಂದು ಕೂಗಿರುವುದು ಸತ್ಯ. ಈ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ವಿಧಾನಸೌಧದ ಒಳಗೆ ಪಾಕ್ ಪರ ಘೋಷಣೆ ಕೂಗಿದ್ದಾರೆ. ಪಾಕಿಸ್ತಾನ್ ಝಿಂದಾಬಾದ್ ಎಂದಿದ್ದನ್ನು ನಾಸಿರ್ ಸಾಬ್ ಝಿಂಬಾಬಾದ್ ಎಂದು ಹೇಳಿದ್ದಾಗಿ ತಿರುಚಲು ಪ್ರಯತ್ನಿಸಿದ್ದಾರೆ. ಕನ್ನಡಿಗರಿಗೆ ಟೋಪಿ ಹಾಕಲು ಹೊರಟಿದ್ದ ಹುನ್ನಾರ ಎಫ್ಎಸ್ಎಲ್ ವರದಿಯಲ್ಲಿ ಬಯಲಾಗಿದೆ ಎಂದು ಬಿಜೆಪಿ ಹೇಳಿದೆ.
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.… pic.twitter.com/sf92Yy43Xv
— BJP Karnataka (@BJP4Karnataka) March 4, 2024